ಮೇಕೆದಾಟು ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ: ಸುಪ್ರೀಂನಲ್ಲಿ ಕರ್ನಾಟಕಕ್ಕೆ ಗೆಲುವು

ನವದೆಹಲಿ,ನವೆಂಬರ್,13,2025 (www.justkannada.in): ಕರ್ನಾಟಕದ ಮಹತ್ವದ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಿದ್ದ ತಮಿಳುನಾಡಿಗೆ ಸುಪ್ರೀಂಕೋರ್ಟ್ ನಲ್ಲಿ ಭಾರಿ ಮುಖಭಂಗವಾಗಿದೆ.

ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು ಈ ಮೂಲಕ ಕರ್ನಾಟಕಕ್ಕೆ ಜಯ ಸಿಕ್ಕಿದೆ. ಮೇಕೆದಾಟು ಯೋಜನೆಗೆ ಕಳೆದ 7 ವರ್ಷದಿಂದ ತಮಿಳುನಾಡು ಅಡ್ಡಗಾಲು ಹಾಕಿತ್ತು.

ಇದೀಗ ತಮಿಳುನಾಡು ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್,   ಮೇಕೆದಾಟು ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದೆ.  ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ  ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ತಿಳಿಸಿದೆ.

Key words: Tamil Nadu, petition, Mekedatu scheme, Supreme Court, Karnataka