Tuesday, September 22, 2026

BDA Apartments

ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ BDA...
Home Front Page ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ

ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ

ಮಂಡ್ಯ,ಮಾರ್ಚ್,23,2026 (www.justkannada.in): ಮಾರ್ಚ್ 28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ  140 ಬಸ್ ಗಳು ಕಾರ್ಯಾಚರಣೆ ನಡೆಸಲಿವೆ.

ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ. ನಿಗಮ ಮಂಡ್ಯ ವಿಭಾಗದ ವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ. ಶ್ರೀರಂಗಪಟ್ಟಣ, ಪಾಂಡವಪುರ ಬಸ್ ನಿಲ್ದಾಣಗಳಿಂದ ಹಾಗೂ ಮೈಸೂರು. ಹಾಸನ, ತುಮಕೂರು ಮತ್ತು ಬೆಂಗಳೂರು ಬಸ್ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್ಸುಗಳ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Melukote, Vairamudi Fair, March 28