ಬೆಳ್ಳಿ ತೆರೆ ಮೇಲೆ ಮೂಡಿಬರಲಿದೆ ಮೀರಾಬಾಯಿ ಚಾನು ಜೀವನ

ಬೆಂಗಳೂರು, ಆಗಸ್ಟ್ 4, 2021 (www.justkannada.in): ಒಲಿಂಪಿಕ್ಸ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಬೆಳ್ಳಿ ತೆರೆಯಲ್ಲಿ ಮೂಡಿ ಬರಲಿದೆ.

ಹೌದು. ಮೀರಾ ಬಾಯಿ ಬಯೋಪಿಕ್ ಮಾಡಲು ಸಿದ್ಧತೆ ನಡೆಯುತ್ತಿದೆ.

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟ ಮಣಿಪುರ ಮೂಲದ ವೇಟ್ ಲಿಫ್ಟರ್ ಮೀರಾ ಬಾಯಿ ಚಾನು ಜೀವನವನ್ನು ತೆರೆಮೇಲೆ ತರುವ ಸಿದ್ಧತೆ ನಡೆಯುತ್ತಿದೆ.

ಮಣಿಪುರ ಮೂಲದ ಸಿನಿಮಾ ನಿರ್ಮಾಣ ಸಂಸ್ಥೆ ಮೀರಾ ಬಾಯಿ ಚಾನು ಜೀವನವನ್ನು ತೆರೆಮೇಲೆ ತರಲು ಮುಂದಾಗಿದೆ.

ಈ ಸಂಬಂಧ ಮೀರಾ ಬಾಯಿ ಕುಟುಂಬದ ಜೊತೆ ಮಾತುಕತೆ ನಡೆಸಿದ್ದು, ಮೀರಾ ಕುಟುಂಬ ಒಪ್ಪಂದಕ್ಕೆ ಸಹಿ ಮಾಡಿದೆ.