Sunday, September 20, 2026

BDA Apartments

ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ- ಸಿಎಂ ಬಿಎಸ್ ಯಡಿಯೂರಪ್ಪ BDA JK_Adv BDA Adv
Home Front Page ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ- ಸಿಎಂ ಬಿಎಸ್ ಯಡಿಯೂರಪ್ಪ.

ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ- ಸಿಎಂ ಬಿಎಸ್ ಯಡಿಯೂರಪ್ಪ.

ಬೆಳಗಾವಿ,ಜುಲೈ25,2021(www.justkannada.in):  ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ. ಸಂದೇಶ ನೋಡಿಕೊಂಡು ಸೂಕ್ತ ತೀರ್ಮಾನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.jk

ಬೆಳಗಾವಿಯ ನೆರೆಹಾನಿ ಪ್ರದೇಶಕ್ಕೆ ಭೇಟಿ ನೀಡಲು ಇಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಹೈಕಮಾಂಡ್ ನಿಂದ ಸಂಜೆ ವೇಳೆಗೆ ಸಂದೇಶ ಬರಬಹುದು. ಸಂದೇಶ ಬಂದರೆ ನಾನು ಹೇಳುತ್ತೇನೆ. ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮೇಲೆ ವಿಶ್ವಾಸವಿದೆ ಎಂದರು.

ಹಾಗೆಯೇ ದಲಿತ ಸಿಎಂ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, , ದಲಿತ ಮುಖ್ಯಮಂತ್ರಿ ಮಾಡುವುದು ನಾನಲ್ಲ, ಹೈಕಮಾಂಡ್. ಇವತ್ತು ಸಂಜೆ ಹೈಕಮಾಂಡ್ ನಿಂದ ಯಾವ ಸಂದೇಶ ಬರಲಿದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು. ಇನ್ನು  ಸ್ವಾಮೀಜಿಗಳು ಯಾವುದೇ ಸಮಾವೇಶ ನಡೆಸುವ ಅಗತ್ಯವಿರಲಿಲ್ಲ ಎಂದರು.

ದೇವರ ದಯೆಯಿಂದ ನಿನ್ನೆ ಮತ್ತು ಇವತ್ತು ಮಳೆ ಕಡಿಮೆಯಾಗಿದೆ. ಎರಡು ದಿನ ಮಳೆ ಕಡಿಮೆಯಾದಲ್ಲಿ ಎಲ್ಲವೂ ಸರಿಯಾಗಿದೆ. ಮಹಾರಾಷ್ಟ್ರದಲ್ಲಿಯೂ ಮಳೆ ಕಡಿಮೆಯಾಗಿದೆ. ಅಲ್ಲಿ ಮಳೆ ಕಡಿಮೆಯಾಗಿರುವುದು ಶುಭ ಸೂಚಕ. ಇಂದು ಬೆಳಗಾವಿಯಲ್ಲಿ ನೆರೆ ಪೀಡಿತ ಪ್ರದೇಶಗಳ ಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Message -High Command –evening-  CM BS Yeddyurappa.