ರಾಜ್ಯದಲ್ಲಿ 5 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿ ಹವಮಾನ ಇಲಾಖೆ.

ಬೆಂಗಳೂರು,ನವೆಂಬರ್,29,2023(www.justkannada.in):  ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಸ್ವಲ್ಪ ಶೀತ ವಾತಾವರಣ ಹೆಚ್ಚಿರುವ ಬಗ್ಗೆಯೂ ಹವಮಾನ ಇಲಾಖೆ ಮುನ್ಸೂ ಚನೆ ನೀಡಿದೆ. ದಕ್ಷಿಣ ಕನ್ನಡ,  ಉತ್ತರ ಕನ್ನಡ, ಉಡುಪಿ, ಬೀದರ್,  ಧಾರವಾಡ,  ಗದಗ, ಹಾವೇರಿ, ಕೊಪ್ಪಳ ವಿಜಯಪುರ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,  ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ 2ರವರೆಗೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.  ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Key words: Meteorological department – forecast -rain – 5 days – state.