ಮೆಟ್ರೋ ಪಿಲ್ಲರ್ ಕುಸಿದು ತಾಯಿಮಗ ಸಾವು ಕೇಸ್: ಮೂವರು ಎಂಜಿನಿಯರ್ ಗಳು ವಜಾ.

kannada t-shirts

ಬೆಂಗಳೂರು,ಜನವರಿ,11,2023(www.justkannada.in):  ನಿನ್ನೆ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್ ಗಳ ತಲೆದಂಡವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಟ್ರೋ ಡೆಪ್ಯೂಟಿ ಚೀಫ್ ಇಂಜಿನಿಯರ್  ಎಕ್ಸ್ ಕ್ಯೂಟಿವ್ ಇಂಜಿನಿಯರ್, ಸೆಕ್ಷನ್ ಇಂಜಿನಿಯರ್  ಮೂವರನ್ನ ಕೆಲಸದಿಂದ ವಜಾ ಮಾಡಿ ಬಿಎಂಆರ್ ಸಿಎಲ್ ಎಂಡಿ ಅಂಜುಂ ಪರ್ವೇಜ್ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ  ಪೂರ್ವ ವಿಭಾಗದ ಡಿಸಿಪಿ ಭೀಮಶಂಕರ್ ಗುಳೇದ್, ಲೋಹಿತ್ ದೂರಿನ ಮೇರೆಗೆ ಗೋವಿಂದಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರ ಹೆಸರು ಉಲ್ಲೇಖವಾಗಿದೆ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇವೆ,  ಕನ್ಸ್ ಟ್ರಕ್ಟರ್, ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ನೊಟೀಸ್ ನೀಡಲಾಗಿದ್ದು  ಬಿಎಂಆರ್ ಸಿಎಲ್ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿದ್ದಾರೆ.  ತಪ್ಪು ಯಾರದ್ದು ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.

Key words: Metro-pillar- collapse  – death-case-Three engineers – Dismiss

website developers in mysore