ಮೆಟ್ರೊ ಪಿಲ್ಲರ್ ಕುಸಿದು ತಾಯಿ ಮಗು ಸಾವು ಪ್ರಕರಣ: ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಣೆ.

ಬೆಂಗಳೂರು,ಜನವರಿ,10,2023(www.justkannada.in):  ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬಿಎಂಆರ್ ಸಿಎಲ್ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ನಗರದ ನಾಗವಾರ – ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ ನಡೆಯುತ್ತಿತ್ತು. ನಾಗವಾರ ಬಳಿ (ಹೆಣ್ಣೂರು ಕ್ರಾಸ್) ಮೆಟ್ರೋ ಪಿಲ್ಲರ್ ನೆಲಕ್ಕೆ ಉರುಳಿ ತಾಯಿ ತೇಜಸ್ವಿನಿ(35) ಎರಡುವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದರು. ಇದೀಗ ಬಿಎಂಆರ್ ಸಿಎಲ್ ಎಂಡಿ ಅಂಜುಂ ಪರ್ವೇಜ್ ಅವರು ಮೃತರ ಕುಟುಂಬಕ್ಕೆ 20 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಬಿಎಂಆರ್ ಸಿಎಲ್ ನ  ಎಂಡಿ ಅಂಜುಂ ಪರ್ವೇಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Key words: Metro- pillar -collapse – death – mother – child-20 lakhs -compensation.