ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ಗಂಭೀರ ಗಾಯಗೊಂಡಿದ್ದ ತಾಯಿ ಮಗು ದುರ್ಮರಣ.

ಬೆಂಗಳೂರು,ಜನವರಿ,10,2023(www.justkannada.in):  ನಿರ್ಮಾಣಹಂತದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್ ಗಳು ಬಿದ್ದು  ಗಂಭೀರ ಗಾಯಗೊಂಡಿದ್ದ ತಾಯಿ ಮತ್ತು ಮಗು ದುರ್ಮರಣಕ್ಕೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ನಾಗವಾರ – ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ ನಡೆಯುತ್ತಿತ್ತು. ನಾಗವಾರ ಬಳಿ (ಹೆಣ್ಣೂರು ಕ್ರಾಸ್) ಮೆಟ್ರೋ ಪಿಲ್ಲರ್ ನೆಲಕ್ಕೆ ಉರುಳಿ ಈ ಘಟನೆ ಸಂಭವಿಸಿದೆ.  ತಾಯಿ ತೇಜಸ್ವಿನಿ(35) ಎರಡುವರೆ ವರ್ಷದ ಮಗು ವಿಹಾನ್ ಮೃತಪಟ್ಟವರು.

ದಂಪತಿ ಹಾಗೂ ಮಗು ಬೈಕ್ ನಲ್ಲಿ ತೆರಳುತ್ತಿದ್ದಾಗ ಮೆಟ್ರೋ ಪಿಲ್ಲರ್ ಕುಸಿದಿದ್ದು,  ಘಟನೆಯಲ್ಲಿ ತಾಯಿ ತೇಜಸ್ವಿನಿ(35) ಎರಡುವರೆ ವರ್ಷದ ಮಗು ವಿಹಾನ್  ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಾಯಿ ಮಗು ಇಬ್ಬರು ಮೃತಪಟ್ಟಿದ್ದಾರೆ. ಘಟನಾಸ್ಥಳಕ್ಕೆ ಮೆಟ್ರೋ ಅಧಿಕಾರಿಗಳು ದೌಡಾಯಿಸಿದ್ದಾರೆ.

Key words: Metro -pillar -collapse -under –construction-mother – child- died