Sunday, October 4, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Crime ಮೈಕ್ರೋಫೈನಾನ್ಸ್ ಕಿರುಕುಳ: ಮೈಸೂರಿನಲ್ಲಿ ಮತ್ತೊಂದು ಬಲಿ.

ಮೈಕ್ರೋಫೈನಾನ್ಸ್ ಕಿರುಕುಳ: ಮೈಸೂರಿನಲ್ಲಿ ಮತ್ತೊಂದು ಬಲಿ.

ಮೈಸೂರು,ಫೆಬ್ರವರಿ,4,2025 (www.justkannada.in): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದ್ದು ಈ ಮಧ್ಯೆಯೂ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸಾವನ್ನಪ್ಪುವುದು ಮುಂದುವರೆದಿದೆ.ಮೈಕ್ರೋಫೈನಾನ್ಸ್ ಕಿರುಕುಳ: ಮೈಸೂರಿನಲ್ಲಿ ಮತ್ತೊಂದು ಬಲಿ nypunya1

ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಜಯರಾಮು( 55) ಸಾವನ್ನಪ್ಪಿರುವ ರೈತ. ಹೆಚ್‌ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಕ್ವಿಟಾಸ್, ಜನಬ್ಯಾಂಕ್ ಮೈಕ್ರೋ ಫೈನಾನ್ಸ್ ನಲ್ಲಿ ರೈತ ಜಯರಾಮು ಸುಮಾರು 5 ಲಕ್ಷ ಸಾಲ ಪಡೆದಿದ್ದರು.

ಜಯರಾಮು ಇಬ್ಬರು ಹೆಣ್ಣು ಮಕ್ಕಳನ್ನ ಮದುವೆ ಮಾಡಿದ್ದು, ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದರು.  ಈ ಮಧ್ಯೆ ಮಕ್ಕಳ ಮದುವೆ ಹಾಗೂ ಕೃಷಿಗೆ ಮೈಕ್ರೋಫೈನಾನ್ಸ್ ನಿಂದ ಸಾಲ ಪಡೆದಿದ್ದರು.  ಇತ್ತೀಚೆಗೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿದ್ದು, ಸಾಲ ತೀರಿಸಲಾಗದೆ ಜಮೀನಿನಲ್ಲಿ ವಿಷ ಸೇವಿಸಿ ಜಯರಾಮು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಹೆಚ್‌ ಡಿ ಕೋಟೆ ಪೊಲೀಸ್  ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: Microfinance, harassment, death, Mysore.