Sunday, August 9, 2026

BDA Apartments

Home Front Page ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆ ಅನುಮೋದನೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆ ಅನುಮೋದನೆ

ಬೆಂಗಳೂರು,ಜನವರಿ,30,2025 (www.justkannada.in): ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಕೊನೆಗೂ ರಾಜ್ಯ ಸರ್ಕಾರ   ನಿರ್ಧಾರ ಕೈಗೊಂಡಿದ್ದು, ಇದೀಗ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆಗೆ ಸುಗ್ರೀವಾಜ್ಞೆ ಹೊರಡಿಸಲು ಅನುಮೋದನೆ ಸಿಕ್ಕಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾನೂನು ಸಚಿವ ಎಚ್‌ಕೆ ಪಾಟೀಲ್, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಸಂಜೆ 4 ಘಂಟೆಗೆ ಹಿರಿಯ ಸಚಿವರ ಸಭೆ ಕರೆಯಲಾಗಿದ್ದು,  ಈ ಸಭೆಯಲ್ಲಿ ಅಂತಿಮ ತೀರ್ಮಾನವನ್ನು ಮಾಡಲಾಗುತ್ತದೆ. ಅಂತಿಮ ತೀರ್ಮಾನ ಕೈಗೊಳ್ಳುವ ಪರಮಾಧಿಕಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಡಲಾಗಿದೆ ಎಂದರು.

ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ. ಸಂಪುಟ ಸಭೆಯಲ್ಲಿ ಸಂಪೂರ್ಣ ಅಧಿಕಾರ ಸಿಎಂ ಅವರಿಗೆ ನೀಡಲಾಗಿದೆ. ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ. ಕೆಲವು ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.

Key words: Cabinet, approves, ordinance, microfinance harassment