Thursday, August 13, 2026

BDA Apartments

Home Front Page ಮಧ್ಯಂತರ ಚುನಾವಣೆ ಆದ್ರೆ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ- ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ…

ಮಧ್ಯಂತರ ಚುನಾವಣೆ ಆದ್ರೆ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ- ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ…

ಹುಬ್ಬಳ್ಳಿ,ನ,25,2019(www.justkannada.in):  ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆದರೆ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಧು ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮಧ್ಯಾಂತರ ಚುನಾವಣೆ ನಡೆದರೇ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ನಾನು ಸಿಎಂ ಆಗೋದು ಬಿಡೋದು ಹೈ ಕಮಾಂಡ್ ನಿರ್ಧಾರ ಎಂದು ತಿಳಿಸಿದರು.

ಉಪಚುನಾವಣೆ ನಂತರ ಜೆಡಿಎಸ್ ಬಿಜೆಪಿಗೆ ಬೆಂಬಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಉಪ ಚುನಾವಣೆಯಲ್ಲಿ ಬಿಜೆಪಿ ಸೋತರೆ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಲ್ಲ. ಜೆಡಿಎಸ್ ಬಗ್ಗೆ ನನಗೆ ಚೆನ್ನಾಗಿ ಗೊತ್ತು ಬೆಂಬಲಿಸಲ್ಲ. ಬೈ ಎಲೆಕ್ಷನ್ ನಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ದರೇ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ- ಎನ್ ಸಿಪಿ ಸರ್ಕಾರ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಇದು ಪ್ರಜಾಪ್ರಭುತ್ವದ ಕಗ್ಗೋಲೆ. ರಾತ್ರೋರಾತ್ರಿ ರಾಷ್ಟ್ರಪತಿ ಆಳ್ವಿಕೆಯನ್ನ ವಾಪಸ್ ಪಡೆದಿದ್ದಾರೆ. ಈ ರೀತಿ ಯಾವಾಗಲೂ ಆಗಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words: midterm -elections-Congress- will -come – power -Former CM Siddaramaiah