ಕೊರೊನಾ ಆರ್ಭಟ ಹಿನ್ನೆಲೆ: ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಯುಎಇಗೆ ಸ್ಥಳಾಂತರ ಸಾಧ್ಯತೆ

ಬೆಂಗಳೂರು, ಏಪ್ರಿಲ್ 28, 2021 (www.justkannada.in): ಭಾರತದಲ್ಲೇ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

ಅಕ್ಟೋಬರ್‌-ನವೆಂಬರ್‌ನಲ್ಲಿ ಭಾರತದಲ್ಲೇ ಟಿ20 ವಿಶ್ವಕಪ್‌ ಪಂದ್ಯಾವಳಿ ನಡೆಯಬೇಕಿತ್ತು. ಆದರೆ ಭಾರತದಲ್ಲಿ ಸದ್ಯ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಟೂರ್ನಿ ಸ್ಥಳಾಂತರ ಸಾಧ್ಯತೆ ಇದೆ.

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ), ಯುಎಇನಲ್ಲಿರುವ ಕ್ರೀಡಾಂಗಣಗಳನ್ನು ವಿಶ್ವಕಪ್‌ ಆಯೋಜನೆಗೆ ಸಿದ್ಧವಿಡುವಂತೆ ಅಲ್ಲಿನ ಕ್ರಿಕೆಟ್‌ ಮಂಡಳಿಗೆ ತಿಳಿಸಿದೆ ಎನ್ನಲಾಗಿದೆ.

ವಿಶ್ವಕಪ್‌ಗೆ ಇನ್ನೂ 6 ತಿಂಗಳು ಬಾಕಿ ಇದ್ದು, ಆ ವೇಳೆಗೆ ಭಾರತದಲ್ಲಿ ಸೋಂಕು ನಿಯಂತ್ರಣಕ್ಕೆ ಬರಬಹುದು ಎನ್ನುವ ನಿರೀಕ್ಷೆ ಇದೆ.