ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಖಾ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಚ್

ಬೆಂಗಳೂರು, ಮೇ 31, 2021 (www.justkannada.in): ಕೊರೊನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಿಲ್ಖಾ ಸಿಂಗ್ ಡಿಸ್ಚಾರ್ಚ್ ಆಗಿದ್ದಾರೆ.

ಕುಟುಂಬದ ಕೋರಿಕೆಯ ಮೇರೆಗೆ ಆಸ್ಪತ್ರೆಯು ಈಗ 91 ವರ್ಷದ ಮಿಲ್ಖಾ ಸಿಂಗ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಫೋರ್ಟಿಸ್ ಆಸ್ಪತ್ರೆ ಹೇಳಿಕೆ ನೀಡಿದೆ.

ಆಮ್ಲಜನಕದ ಕೊರತೆಯಿಂದಾಗಿ ಅವರ ಪತ್ನಿಯನ್ನು ಶನಿವಾರ ರಾತ್ರಿ ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರ ಸ್ಥಿತಿಯೂ ಕ್ರಮೇಣ ಸ್ಥಿರವಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮಿಲ್ಖಾ ಸಿಂಗ್ ಅವರ ಪುತ್ರ ಭಾರತೀಯ ಗಾಲ್ಫ್ ಆಟಗಾರ ಜೀವ್ ಮಿಲ್ಖಾ ಸಿಂಗ್ ದುಬೈನಿಂದ ಭಾರತಕ್ಕೆ ಬಂದಿದ್ದಾರೆ.