ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಹತ್ಯೆ ಕೇಸ್‌: ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ.

ಬೆಂಗಳೂರು,ನವೆಂಬರ್,6,2023(www.justkannada.in): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಿರಣ್ ಎಂಬಾತ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ. ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎನ್ನುವವರನ್ನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್​ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.

ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾಗಿದ್ದರು. ಆದರೆ ಪ್ರತಿಮಾ ಅವರು ಕಿರಣ್​ ನನ್ನು ಕೆಲಸದಿಂದ ತೆಗೆದುಹಾಕಿದ್ದರು.

Key words: Mines-Geology –Department- officer – murder –case-arrested