ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲ್ಲ: ಯಾರಿಗೂ ಅಸಮಾಧಾನ ಇಲ್ಲ- ಸಚಿವ ಎಸ್.ಟಿ ಸೋಮಶೇಖರ್.

ಮಂಡ್ಯ,ಆಗಸ್ಟ್,11,2021(www.justkannada.in):  ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ. ಸರ್ಕಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯ ಜಿಲ್ಲೆ ಮಾರಸಿಂಗನಹಳ್ಳಿಯಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್,  ರಾಜಕೀಯ ಪಕ್ಷ ಅಂದ ಮೇಲೆ ಸಣ್ಣಪುಟ್ಟ ಸಮಸ್ಯೆ ಇರುತ್ತೆ. ಇವತ್ತು ಸಂಜೆ 6 ಗಂಟೆಗೆ ಬರುತ್ತಾರೆ ಅವರ ಜತೆ ಮಾತನಾಡುತ್ತೇವೆ. ಇಂದೇ ಅವರ ಸಮಸ್ಯೆ ಬಗೆಹರಿಸುತ್ತೇವೆ. ಎಂಟಿಬಿ ಆನಂದ್ ಸಿಂಗ್  ಎಲ್ಲರ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದರು.

ತಮಗೆ ಇಷ್ಟದ ಖಾತೆ ನೀಡದೇ ಇರುವ ಹಿನ್ನೆಲೆ ಸಚಿವ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು ಈಗಾಗಲೇ ಇಬ್ಬರನ್ನ ಕರೆದು ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದರು. ಇದೀಗ ಅಸಮಾಧಾನ ತಣ್ಣಗಾಗದ ಹಿನ್ನೆಲೆಯಲ್ಲಿ ಮತ್ತೆ ಸಚಿವ ಆನಂದ್ ಸಿಂಗ್ ಅವರ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಲಿದ್ದಾರೆ ಎನ್ನಲಾಗಿದೆ.

Key words:  Minister -Anand Singh – not resigned-Minister- ST Somashekhar-mandya