Thursday, August 20, 2026

BDA Apartments

Home Front Page ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ವಿಧಾನಸಭೆಯಲ್ಲಿ ಪ್ರತಿಧ್ವನಿ: ಕಾಂಗ್ರೆಸ್ ಸದಸ್ಯರಿಂದ ಆಕ್ರೋಶ.

ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ವಿಧಾನಸಭೆಯಲ್ಲಿ ಪ್ರತಿಧ್ವನಿ: ಕಾಂಗ್ರೆಸ್ ಸದಸ್ಯರಿಂದ ಆಕ್ರೋಶ.

ಬೆಂಗಳೂರು,ಫೆಬ್ರವರಿ,16,2023(www.justkannada.in): ಟಿಪ್ಪು ರೀತಿ ಸಿದ್ದರಾಮಯ್ಯರನ್ನ ಹೊಡೆದು ಹಾಕೋಣ ಎಂಬ ಸಚಿವ ಅಶ್ವತ್ ನಾರಾಯಣ್ ಹೇಳಿಕೆ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿ ಆಡಳಿತ ಪಕ್ಷ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ  ಕಾಂಗ್ರೆಸ್ ಶಾಸಕ ಯುಟಿ ಖಾದರ್, ಮಂತ್ರಿಯಾಗಿ ಈ ರೀತಿ ಹೇಳಿಕೆ ಸರಿಯಲ್ಲ. ಅಶ್ವಥ್ ನಾರಾಯಣ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು. ಅಶ್ವಥ್ ವಿರುದ್ದ ಕೇಸ್ ಹಾಕಬೇಕು. ಈ ರೀತಿ ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯೋದು ಬೇಡ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸದಸ್ಯರ ಆಕ್ರೋಶದ ನಡುವೆ  ಸಚಿವ ಅಶ್ವಥ್ ನಾರಾಯಣ್ ಮಾತನಾಡಿ  ಮತ್ತೆ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಕಲಾಪವನ್ನ ಸ್ಪೀಕರ್ ಕಾಗೇರಿ ಕೆಲಕಾಲ ಮುಂದೂಡಿದರು.

Key words: Minister-Aswath Narayan- statement –Assembly-  Outrage -Congress