ಬೆಂಗಳೂರು, ಆಗಸ್ಟ್ 26,2026 (ww.justkannada.in): ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿರುವ ಕುರಿತು ಕೇಳಿದ ಪ್ರಶ್ನೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ , ಸಚಿವರು, ಶಾಸಕರು, ಕಾರ್ಯಕರ್ತರು ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು. ಈ ಬಗ್ಗೆ ನಾನು ಹೇಳುವುದಿಷ್ಟೇ ಎಂದಿದ್ದಾರೆ .
ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ವಿಪಕ್ಷ ಬಿಜೆಪಿ ಸದಸ್ಯರು ಸದನದಲ್ಲಿ ಹೋರಾಟ ನಡೆಸಿ ಆಗ್ರಹಿಸಿದ್ದರು. ಇದರಿಂದಾಗಿ ಸದನ ಸರಿಯಾಗಿ ನಡೆಯದೇ ಅಧಿವೇಶನ ಅಂತ್ಯಗೊಳಿಸಲಾಯಿತು. ಈ ಮಧ್ಯೆ ಪಕ್ಷಕ್ಕೆ ಮುಜುಗರ ಬಾರದಂತೆ ತಡೆಯಲು ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದೆ.
Key words: Minister, B.Nagendra, Resignation, CM, DK Shivakumar







