ಧಾರವಾಡ,ಅಕ್ಟೋಬರ್,16,2026 (www.justkannada.in): ಸ್ಟಿಂಗ್ ಆಪರೇಷನ್ ವಿಚಾರ ತನಿಖೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.
ಇಂದು ಮಾದ್ಯಮಗಳ ಜೊತೆ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, ಸ್ಟಿಂಗ್ ಆಪರೇಷನ್ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ ಹಾಗಾಗಿ ಮಾತನಾಡಲ್ಲ ಸ್ಟಿಂಗ್ ವಿಚಾರವಾಗಿ ಇಲ್ಲಿ ಮಾತನಾಡುವುದು ಸರಿಯಲ್ಲ ಸೂಕ್ತ ತೀರ್ಮಾನ ತೆಗೆದುಕೊಳ್ಳಲು ಸಿಎಂಗೆ ಹೇಳಿದ್ದೇವೆ. ಸಿಎಂ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ಸಿಬಿಐ ತನಿಖೆಗೆ ಬಸವರಾಜ ಬೊಮ್ಮಾಯಿ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಸವರಾಜ ರಾಯರೆಡ್ಡಿ, ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಾರೆ. ಸಿಎಂ ಡಿಕೆ ಶಿವಕುಮಾರ್ ಅವರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.
sting operation, CM, DK Shivakumar, appropriate decision, Minister, Basavaraj Rayareddy






