ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಸಚಿವ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜುಲೈ,2,2021(www.justkannada.in): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ನಡೆಸಿದರು.jk

ಜಿಎಸ್ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿಯಾಗಿರುವ  ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವಿನ ಬೇಡಿಕೆ ಇಟ್ಟರು. ಜತೆಗೆ ರಾಜ್ಯದ ಪಾಲಿನ ಜಿಎಸ್ಟಿ ಪರಿಹಾರ ಬಾಕಿ 11,800 ಕೋಟಿ  ಬಿಡುಗಡೆ ಮಾಡುವಂತೆ ನಿರ್ಮಲಾ ಸೀತಾರಾಮನ್ ಗೆ ಮನವಿ ಮಾಡಿದರು.

ಈ ವೇಳೆ ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಿಗೆ ಆರ್ಥಿಕ ನೆರವು ನೀಡುವುದಾಗಿ  ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು. ಈ ಸಮಯದಲ್ಲಿ ಸೀತಾರಾಮನ್ ಅವರಿಗೆ ಗೃಹ ಸಚಿವ ಬಸವರಾಜ  ಬೊಮ್ಮಾಯಿ ಧನ್ಯವಾದ ಹೇಳಿದರು.

Key words: Minister -Basavaraja Bommai- met –Union-Finance Minister -Nirmala Sitharaman.