ಧೈರ್ಯವಾಗಿ ಬಂದು ಪರೀಕ್ಷೆ ಬರೆಯಿರಿ- ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಬಿ.ಸಿ ನಾಗೇಶ್.

ಬೆಂಗಳೂರು,ಮಾರ್ಚ್,28,2022(www.justkannada.in):  ಇಂದಿನಿಂದ ರಾಜ್ಯದಲ್ಲಿ ಎಸ್.ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಶುಭಕೋರಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ರಾಜ್ಯದ ಶೇ 99.9 ಶಾಲೆಗಳಲ್ಲಿ ಯಾವುದೇ ಸಮಸ್ಯೆ ಇಲ್ಲ.  ವಿದ್ಯಾರ್ಥಿಗಳು ಕೋರ್ಟ್ ಆದೇಶ ಪಾಲಿಸಬೇಕು ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆಂಬ ವಿಶ್ವಾಸವಿದೆ. ಎಲ್ಲಾ ವಿದ್ಯಾರ್ಥಿಗಳು ಧೈರ್ಯವಾಗಿ ಬಂದು ಪರೀಕ್ಷೆ ಬರೆಯಿರಿ ಎಂದು ತಿಳಿಸಿದ್ದಾರೆ.

Key words: Minister – BC Nagesh-  SSLC-students- wishes.