Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page BMTC ಬಸ್ ಗಳ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಭೈರತಿ ಸುರೇಶ್

BMTC ಬಸ್ ಗಳ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಭೈರತಿ ಸುರೇಶ್

ಬೆಂಗಳೂರು,ಜುಲೈ,4,2026 (www.justkannada.in):  ಇಂದು ಬೆಂಗಳೂರಿನ ಕೆಆರ್ ಸರ್ಕಲ್ ಬಳಿ ಎರಡು ಬಿಎಂಟಿಸಿ ಬಸ್ ಗಳ ನಡುವೆ ಅಪಘಾತವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಸಾರಿಗೆ ಸಚಿವ ಭೈರತಿ ಸುರೇಶ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕೆಆರ್ ಸರ್ಕಲ್ ಬಳಿ ಎರಡು ಬಿಎಂಟಿಸಿ ಬಸ್ ಗಳ ನಡುವೆ ಅಪಘಾತವಾಗಿ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಂಟ್ ಮಾರ್ಥಸ್ ಆಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ ಭೈರತಿ ಸುರೇಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದರು.BMTC ಬಸ್ ಗಳ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಭೈರತಿ ಸುರೇಶ್ bmtc bus

ಬಳಿಕ ಮಾತನಾಡಿದ ಸಚಿವ ಭೈರತಿ ಸುರೇಶ್, 13 ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಕೆಲವರು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಎಲ್ಲರನ್ನೂ ಸೇಂಟ್ ಮಾರ್ಥಸ್ ಆಸ್ಪತ್ರೆಗ ದಾಖಲಿಸಲು ಹೇಳಿದ್ದೇನೆ. ಎಲ್ಲರು ಔಟ್ ಆಫ್ ಡೇಂಜರ್.  ಮಳೆ ಬೀಳುತ್ತಿದ್ದರಿಂದ  ಸ್ಕಿಡ್ ಆಯ್ತು ಅಂತಾ ಸಿಬ್ಬಂದಿ ಹೇಳಿದ್ದಾರೆ. ಸಿಸಿ ಟಿವಿ ದೃಶ್ಯಾವಳಿ ಇದೆ.  ಅದನ್ನು ಆಧರಿಸಿ ತನಿಖೆ ಆಗುತ್ತೆ  ಎಂದರು.BMTC ಬಸ್ ಗಳ ಅಪಘಾತ jk02_new jk02 new

Key words: BMTC bus, accident, Minister, Bhairati Suresh,