Wednesday, October 21, 2026

Dasara Wishes

Happy Dasara
Home Front Page ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಭೈರತಿ ಸುರೇಶ್

ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಭೈರತಿ ಸುರೇಶ್

ಬೆಂಗಳೂರು,ಸೆಪ್ಟಂಬರ್,4,2026 (www.justkannada.in): ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಶೀಘ್ರವೇ ಬಸ್ ಪ್ರಯಾಣ ದರ ಏರಿಕೆಯ ಶಾಕ್ ತಟ್ಟಲಿದೆ, ಶೀಘ್ರವೇ ಸರ್ಕಾರಿ ಬಸ್​​ಗಳ ಟಿಕೆಟ್​​ ದರದ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಸಾರಿಗೆ ಸಚಿವೆ ಭೈರತಿ ಸುರೇಶ್, ಬಸ್ ಪ್ರಯಾಣಿಕರಿಗೆ ಅತ್ಯಲ್ಪ ಹೊರೆ ಆಗಲಿದೆ  ಕೇಂದ್ರ ತೈಲೋತ್ಪನ್ನಗಳ  ದರ ಹೆಚ್ಚಳ ಮಾಡಿದೆ.  ಹೀಗಿದ್ದರೂ ನಾವು ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಈ ಮಧ್ಯೆ 4 ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ನಷ್ಟವಾಗಿದೆ.  ಹೀಗಾಗಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂದರು.ಶೀಘ್ರದಲ್ಲೇ ಬಸ್ ಟಿಕೆಟ್ ದರ ksrtc

ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದ್ದು, ಸದ್ಯದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಭೈರತಿ ಸುರೇಶ್ jk02_new jk...

Key words: Minister, Bhairati Suresh, bus ticket, price, hike, soon