
ಮಂಡ್ಯ, ಆ.7: ಕರ್ನಾಟಕ ಸರ್ಕಾರದ ಸಚಿವ ಸಂಪುಟದರ್ಜೆ ಸಚಿವ ಎನ್. ಚಲುವರಾಯಸ್ವಾಮಿ ಅವರು ಮುಂಗಾರು ಬರ ಪರಿಸ್ಥಿತಿಯ ಪರಿಶೀಲನೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಸ್ಟ್ 8 ಮತ್ತು 9ರಂದು ಮಂಡ್ಯ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಆಗಸ್ಟ್ 8 (ಶನಿವಾರ) ಬೆಳಿಗ್ಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮಂಡ್ಯಕ್ಕೆ ಆಗಮಿಸುವ ಸಚಿವರು, ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಸಿಲ್ವರ್ ಜ್ಯುಬಿಲಿ ಪಾರ್ಕ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಮಧ್ಯಾಹ್ನ 2.30ಕ್ಕೆ ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ಮುಂಗಾರು ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಮದ್ದೂರು ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಮುಂಗಾರು ಬರ ಪರಿಸ್ಥಿತಿಯ ಕ್ಷೇತ್ರ ವೀಕ್ಷಣೆ ನಡೆಸಿ, ಸಂಜೆ ಮಂಡ್ಯದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಆಗಸ್ಟ್ 9 (ಭಾನುವಾರ) ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಮೊದಲು ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಹೋಬಳಿ ಪ್ರದೇಶಗಳಲ್ಲಿ ಬರ ಪರಿಸ್ಥಿತಿಯ ಪರಿಶೀಲನೆ ನಡೆಸಲಿದ್ದಾರೆ.
ನಂತರ ಮಂಡ್ಯ ತಾಲ್ಲೂಕಿನ ದುದ್ದ ಗ್ರಾಮ, ಬಿ. ಹಟ್ನ ಗ್ರಾಮ ಹಾಗೂ ಪಾಂಡವಪುರ ತಾಲ್ಲೂಕಿನ ಎಂ. ಬೆಟ್ಟಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ಇದೇ ವೇಳೆ ಬರಪೀಡಿತ ಪ್ರದೇಶಗಳ ವೀಕ್ಷಣೆಯನ್ನೂ ಕೈಗೊಳ್ಳಲಿದ್ದಾರೆ.
ಸಂಜೆ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಆಯ್ದ ಗ್ರಾಮಗಳಲ್ಲಿ ಮುಂಗಾರು ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸಚಿವರು ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಮರಳಲಿದ್ದಾರೆ.
Key words: Monsoon Drought Review, Minister Cheluvarayaswamy, Visit Mandya

SUMMARY:
Monsoon Drought Review: Minister Cheluvarayaswamy to Visit Mandya
Mandya, Aug. 7: Karnataka Cabinet Minister N. Cheluvarayaswamy will undertake a two-day tour of Mandya district on August 8 and 9 to review the monsoon drought situation.
On August 8, he will attend a public meeting organised by the District Congress Committee in Mandya, hold a review meeting with district officials, and inspect drought-affected areas in Maddur taluk.

On August 9, the minister will visit drought-hit villages in Malavalli, Mandya, Pandavapura, and KR Pet taluks. He will also meet the families of farmers who recently died by suicide and offer condolences before returning to Bengaluru.







