ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಬಳಿಕ ಸಚಿವ ಸಿ.ಪಿ ಯೋಗೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು,ಜೂನ್,17,2021(www.justkannada.in):  ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ನಿವಾರಣೆ ಮತ್ತು ಸಮಸ್ಯೆ ಆಲಿಸುವ ಉದ್ದೇಶದಿಂದ ರಾಜ್ಯ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನ ಹಲವು ಶಾಸಕರು ಸಚಿವರು ಭೇಟಿಯಾಗಿ ಚರ್ಚಿಸುತ್ತಿದ್ದಾರೆ.jk

ರಾಜ್ಯ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಅವರನ್ನ ಭೇಟಿಯಾಗಿ ಶಾಸಕರು ತಮ್ಮ ಸಮಸ್ಯೆಗಳ, ಗೊಂದಲಗಳನ್ನ ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಸಚಿವ ಸಿ.ಪಿ ಯೋಗೇಶ್ವರ್ ಸಹ ಅರುಣ್ ಸಿಂಗ್ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

ಬಳಿಕ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಸಿ.ಪಿ ಯೋಗೇಶ್ವರ್, ಅರುಣ್ ಸಿಂಗ್ ಗೆ ನನ್ನ ವಿಚಾರವನ್ನ ತಿಳಿಸಿದ್ದೇನೆ. ಏನು ಹೇಳಬೇಕೋ ಎಲ್ಲವನ್ನೂ ಅರುಣ್ ಸಿಂಗ್ ಮುಂದೆ ಹೇಳಿದ್ದೇನೆ. ಏನು ನಿವೇದನೆ ಮಾಡಬೇಕಿತ್ತೋ ಅದೆಲ್ಲವನ್ನೂ ಮಾಡಿದ್ದೇನೆ. ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಹೀಗಾಗಿ  ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾಧ್ಯಮಗಳ ಬಳಿ ಹೇಳಲ್ಲ ಎಂದು ತಿಳಿಸಿದ್ದಾರೆ.

Key words: Minister- CP Yogeshwar -after –meet- in charge – Arun Singh