Monday, September 28, 2026

BDA Apartments

ಇಂದು ಸಂಜೆ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ BDA JK_Adv BDA Adv
Home Front Page ಇಂದು ಸಂಜೆ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ

ಇಂದು ಸಂಜೆ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆ

ಚಿತ್ರದುರ್ಗ,ಮೇ,11,2026 (www.justkannada.in):  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನರಾದ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ನೆರವೇರಲಿದೆ.

ಮಧ್ಯಾಹ್ನ 3 ಗಂಟೆವರೆಗೆ ಸಚಿವ ಡಿ.ಸುಧಾಕರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ   ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ  ಸೇರಿ ಸಚಿವರು ಶಾಸಕರು  ಅಂತಿಮ ದರ್ಶನ ಪಡೆಯಲಿದ್ದಾರೆ. ಜೈನ್ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.

ಈ ಕುರಿತು ಮಾಹಿತಿ ನೀಡಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್  ಸಂಜೆ 4 ಗಂಟೆಗೆ ಚಳ್ಳೆಕೆರೆಯ ಮುಕ್ತಧಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದ್ದು ಮಧ್ಯಾಹ್ನ 3ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅಂತ್ಯಕ್ರಿಯೆಗೆ ಸಿದ್ದತೆ ನಡೆಸಲಾಗಿದ್ದು ಭದ್ರತೆಗಾಗಿ  2ಸಾವಿರ ಪೊಲೀಸ್  ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.   ಸಿಎಂ, ಡಿಸಿಎಂ, ಬಹುತೇಕ ಸಚಿವರು ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿಸಿದರು.

Key words: Minister, D. Sudhakar, funeral, Chitradurga