Wednesday, July 29, 2026

BDA Apartments

Home Front Page ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಬೇಸಿಗೆ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.  ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬೇಸಿಗೆ ಬಿರು ಬಿಸಿಲು ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು ಹೀಗಾಗಿ ಎಲ್ಲಾ ಕಡೆ ಮಾರ್ಗಸೂಚಿ ನೀಡಲಾಗಿದೆ. ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ರಾಜ್ಯದಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್ ಮೀಸಲು ಇಡಲಾಗಿದೆ. ಈವರೆಗೂ ಅಹಿತಕರ ಘಟನೆ ನಡೆದಿಲ್ಲ ಎಂದು ಮಾಹಿತಿ ನೀಡಿದರು.

ರಾಜ್ಯಲ್ಲಿ 225 ವೈದ್ಯರ ನೇಮಕಾತಿಗೆ ಅನುಮೋದನೆ ಸಿಕ್ಕಿದೆ. ವೈದ್ಯರು ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words: emergency, treatment, heat stroke – Minister, Dinesh Gundu Rao