ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಮ್ಮಲ್ಲಿ ಯಾವ ಗೊಂದಲವಿಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ ಎಂದರು.
ಸಂಪುಟ ಪುನಾರಚನೆಯಾಗಿ ಭೇರೆಯವರಿಗೆ ಅವಕಾಶ ಸಿಗಬೇಕು ಆ ಬಗ್ಗೆ ಹೈಕಮಾಂಡ್, ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ. ಸಂಪುಟ ವಿಸ್ತರಣೆ ನಿರೀಕ್ಷೆಇದೆ, ಆಗಬೇಕು. ಪಕ್ಷ ಏನೇ ನಿರ್ಧಾರ ಕೈಗೊಂಡರೂ ನಾವು ಒಪ್ಪಿಕೊಳ್ಳುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
Key words: Cabinet reshuffle, others, chance, Minister, Dinesh Gundu Rao







