ಬೆಳಗಾವಿ,ಡಿಸೆಂಬರ್,18,2025 (www.justkannada.in): ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಸದನದಲ್ಲಿ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಮೊಟ್ಟೆ ವಿಚಾರ ವಿಧಾನಸಭೆ ಕಲಾಪದಲ್ಲಿ ಸದ್ದು ಮಾಡಿದ್ದು ಈ ಕುರಿತು ಸದನದಲ್ಲಿ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಮೊಟ್ಟೆ ಸುರಕ್ಷಿತನಾ ಅನ್ನೋ ಬಗ್ಗೆ ಸ್ಪಷ್ಟನೆ ನೀಡಲಿ. ವಿದ್ಯಾರ್ಥಿಗಳು ರಾಜ್ಯದ ಜನರಿಗೆ ಹೇಳಲಿ ಎಂದು ಆಗ್ರಹಿಸಿದರು.
ಶಾಸಕ ಸುನೀಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮೊಟ್ಟೆಯಿಂದ ಯಾರೂ ಆತಂಕ ಪಡಬೇಕಿಲ್ಲ. ಕಳೆದ ವರ್ಷ 147 ಮಾದರಿ ಪರೀಕ್ಷೆ ಮಾಡಿದ್ದೇವೆ ಮೊಟ್ಟೆಗಳನ್ನ ತಿನ್ನಬಹುದು. ಆರೋಗ್ಯಕ್ಕೆ ಒಳ್ಳೆಯದು ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಡುವುದನ್ನ ನಿಲ್ಲಿಸುವುದು ಬೇಡ ಎಂದರು.
Key words: eggs, no worry, Minister, Dinesh Gundurao, Session







