ಐಟಿ ದಾಳಿ ವೇಳೆ ಸಿಕ್ಕ ಹಣ ಕಾಂಗ್ರೆಸ್ ನದ್ದು ಎಂಬ ಬಿಜೆಪಿ ಆರೋಪಕ್ಕೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು.

ಬೆಂಗಳೂರು,ಅಕ್ಟೋಬರ್,18,2023(www.justkannada.in): ಐಟಿ ದಾಳಿ ವೇಳೆ ಸಿಕ್ಕ ಹಣ ಕಾಂಗ್ರೆಸ್ ನದ್ದು ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಧಾರರಹಿತ ಆರೋಪ ಮಾಡುವುದು ಬಿಜೆಪಿಗೆ ಒಂದು ಚಾಳಿಯಾಗಿದೆ ಎಂದು ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಗುಂಡೂರಾವ್, ಪಂಚರಾಜ್ಯ ಚುನಾವಣೆಯಲ್ಲೂ ಬಿಜೆಪಿಗೆ ಸೋಲಿನ ಭೀತಿ ಇದೆ.  ಕರ್ನಾಟಕದಲ್ಲಿ ಹೇಗೆ ಆಡಳಿತ ಕೊಟ್ಟಿದ್ದಾರೆ ಎಂದು ದೇಶಕ್ಕೆ ಗೊತ್ತಿದೆ.  ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಕೆಟ್ಟ ಹೆಸರು ತರಲು ಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಐಟಿ ಸಿಬಿಐ ಎಲ್ಲಾ  ಸಂಸ್ಥೆಗಳು ಬಿಜೆಪಿಯರ ಕೈಯಲ್ಲಿ ಇದೆ. ಬಿಜೆಪಿಯವರ ನಿರ್ದೇಶನದಂತೆ ಐಟಿ ಸಿಬಿಐ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರ ಮನೆ ಮೇಲೆ ಐಟಿ ಸಿಬಿಐ ದಾಳಿ ಆಗಿದ್ದನ್ನು ನೋಡಿಲ್ಲ. ಐಟಿ ದಾಳಿ ವೇಳೆ ಸಿಕ್ಕ ಹಣ ಕಾಂಗ್ರೆಸ್ ನವರದ್ದಲ್ಲ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ದ ಕ್ರಮ ಆಗಲಿ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: Minister- Dinesh Gundurao – BJP- allegation – money- found – IT -raid