ಸಂಪುಟ ಪುನರ್ ರಚನೆ ವಿಚಾರ : ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದ ಸಚಿವ ದಿನೇಶ್ ಗುಂಡೂರಾವ್.

ಬೆಂಗಳೂರು,ಅಕ್ಟೋಬರ್,7,2023(www.justkannada.in): ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಸಂಪುಟದಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕಾಗುತ್ತದೆ ಹೀಗಾಗಿ ಸಂಪುಟ ಪುನರ್ ರಚನೆ ಆಗುತ್ತಿರುತ್ತೆ ಸಂಪುಟದಲ್ಲಿ ಅವಕಾಶ ಸಿಗದೆ ಇರುವವರಿಗೆ ಅವಕಾಶ ಸಿಗಬಹುದ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಪೋಸ್ಟ್ರ್ ಮಾಡಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್,  ಬಿಜೆಪಿಯವರು ತಮ್ಮ ಸಂಸ್ಕೃತಿಯನ್ನ ಪ್ರದರ್ಶನ ಮಾಡುತ್ತಿದ್ದಾರೆ. ಇದು ಬಿಜೆಪಿ ನಾಯಕರ ಕೀಳು ಮನಸ್ಥಿತಿ ತೋರುತ್ತದೆ. ರಾಹುಲ್ ಗಾಂಧಿ ಅವರ ಜನಪ್ರಿಯತೆ ಹೆಚ್ಚುತ್ತಲೇ ಇದೆ. ಹಾಗಾಗಿ ಹತಾಶೆ ಮನೋಭಾವದಿಂದ ಹಾಗೆ ಮಾಡುತ್ತಿದ್ದಾರೆ.  ಕೀಳುಮಟ್ಟದ ರಾಜಕಾರಣವನ್ನ ಬಿಜೆಪಿ ಪ್ರದರ್ಶಿಸುತ್ತಿದೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

Key words: Minister -Dinesh Gundurao – High Command – decision – cabinet -restructuring.