ಬೆಂಗಳೂರು,ಜನವರಿ,6,2026 (www.justkannada.in): ದೀರ್ಘಾವಧಿ ಸಿಎಂ ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಡಿ. ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಹಿನ್ನೆಲೆಯಲ್ಲಿ ಇಂತಹ ಅವಕಾಶಗಳು ಕಾಂಗ್ರೆಸ್ ನಲ್ಲಿ ಮಾತ್ರ ಸಾಧ್ಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿ ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜು ಅರಸು ಅವರ ದಾಖಲೆ ಸರಿಗಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಇಂತಹ ಅವಕಾಶಗಳು ಸಾಧ್ಯ. ದೇವರಾಜ ಅರಸು ಅವರಿಗೂ ಅವಕಾಶ ನೀಡಲಾಗಿತ್ತು. ಈಗ ಸಿದ್ದರಾಮಯ್ಯ ಅವರಿಗೂ ಅವಕಾಶ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಇಂತಹ ಬೆಳವಣಿಗೆಗಳನ್ನು ನೋಡಬಹುದು ಎಂದರು.
ಬಳ್ಳಾರಿ ಘಟನೆ ಸಂಬಂಧ ಮೃತ ರಾಜಶೇಖರ್ ನ ಮರಣೋತ್ತರ ಪರೀಕ್ಷೆ ಎರಡು ಬಾರಿ ಆಗಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬುದಾಗಿ ಹೇಳಿಕೆ ನೀಡಿರುವ ನಾಯಕರುಗಳು ನೋಡಿದ್ದಾರೆಯೇ? ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹೇಳಿಕೆ ನೀಡಿದ್ದಾರೆ. ಇನ್ನು ಯಾರ ಮಾತನ್ನು ನಂಬಬೇಕು ಎಂದು ಪ್ರಶ್ನಿಸಿದರು.
Key words: Long-term, CM, record, Siddaramaiah, Home Minister, Dr. G. Parameshwar







