ಕೊರೋನಾ ಲಸಿಕೆ ವಿತರಣೆಗೆ ರಾಜ್ಯ ಸಿದ್ಧ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜನವರಿ 2,2021(www.justkannada.in): ಲಸಿಕೆ ಹಾಕುವ ಅಣಕು ಕಾರ್ಯದಿಂದ ಸಿಬ್ಬಂದಿಗೆ ತರಬೇತಿ ದೊರೆತಿದೆ. ಜನವರಿಯಲ್ಲೇ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ಲಸಿಕೆ ಸಿಕ್ಕ ಬಳಿಕ ವಿತರಿಸಲು ಈ ಅಣಕು ಕಾರ್ಯ ನೆರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.jk-logo-justkannada-mysore

ಯಲಹಂಕ ಸಾರ್ವಜನಿಕ ಆಸ್ಪತ್ರೆಯ ಮಾದರಿ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಸುಧಾಕರ್,  ಲಸಿಕೆ ವಿತರಣೆಯ ಅಣಕು ಕಾರ್ಯವನ್ನು ಪರಿಶೀಲಿಸಿದರು. ನಂತರ  ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಕಡೆ ಲಸಿಕೆ ನೀಡುವ ಅಣಕು ಪ್ರಯೋಗ ನಡೆಯುತ್ತಿದೆ. ಯಲಹಂಕ ಆಸ್ಪತ್ರೆಯಲ್ಲಿ 25 ಮಂದಿಗೆ (ಅಣಕು) ಲಸಿಕೆ ನೀಡಲಾಗುತ್ತಿದೆ. ಶಿಷ್ಟಾಚಾರದಂತೆ ಲಸಿಕೆ ಹಾಕುವ ಅಣಕು ಪ್ರಕ್ರಿಯೆ ನಡೆಯುತ್ತಿದೆ. ಲಸಿಕೆ ಬಂದ ಬಳಿಕ ಈ ಅಭ್ಯಾಸ ನೆರವಾಗಲಿದೆ. ಜನವರಿಯಲ್ಲೇ ಲಸಿಕೆ ದೊರೆಯುವ ನಿರೀಕ್ಷೆ ಇದೆ. ಕಳೆದ ಎರಡು ತಿಂಗಳಿಂದ ಸಭೆ ನಡೆಸಿ, ಆಸ್ಪತ್ರೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.

ಕೊರೊನಾ ಲಸಿಕೆಯನ್ನು ಕೊರೊನಾ ಯೋಧರಿಗೆ ಮೊದಲ ಹಂತದಲ್ಲಿ ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕೇಂದ್ರ ನೀಡಲಿದೆ. ಅದರಂತೆ, ಕ್ರಮ ವಹಿಸಲಾಗುವುದು. ಲಸಿಕೆ ವಿತರಣೆಗೆ ಬೇಕಾದ ಕೋಲ್ಡ್ ಸ್ಟೋರೇಜ್, ಸಾರಿಗೆ ವ್ಯವಸ್ಥೆ, ಸಿಬ್ಬಂದಿ ನೇಮಕ ಮೊದಲಾದ ಸಿದ್ಧತೆ ಪೂರ್ಣಗೊಂಡಿದೆ. ಬೇರೆ ಲಸಿಕೆಗಳನ್ನು ವಿತರಿಸಲು ಬೇಕಿರುವ ಮೂಲಸೌಕರ್ಯಗಳು ನಮ್ಮಲ್ಲಿವೆ. ಇದನ್ನು ಕೂಡ ಕೊರೊನಾ ಲಸಿಕೆ ಸಂಗ್ರಹ, ವಿತರಣೆಗೆ ಬಳಸಿಕೊಳ್ಳಲಾಗುವುದು ಎಂದರು.

ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರಲ್ಲಿ 42 ರಲ್ಲಿ 32 ಮಂದಿಗೆ ಕೊರೊನಾ ಪಾಸಿಟಿವ್ ಆಗಿತ್ತು. 10 ಜನರಿಗೆ ರೂಪಾಂತರಗೊಂಡ ಕೊರೊನಾ ವೈರಾಣು ಇರುವುದು ದೃಢವಾಗಿದೆ. ಈ ಹತ್ತು ಮಂದಿಗೆ ತೀವ್ರವಾದ ಸಮಸ್ಯೆ ಇಲ್ಲ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆ ನೀಡುತ್ತಿದ್ದು, ಬೇಗನೆ ಗುಣಮುಖರಾಗುವ ವಿಶ್ವಾಸವಿದೆ. ಈಗ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. 12 ಲಕ್ಷಕ್ಕೂ ಅಧಿಕ ಜನರು ಗುಣಮುಖರಾಗಿದ್ದಾರೆ. ಇದೇ ರೀತಿ ಇದ್ದರೆ, ಕೊರೊನಾದಿಂದ ಆಪತ್ತು ಎದುರಿಸುವ ದಿನ ದೂರವಾಗಿದೆ ಎನ್ನಬಹುದು ಎಂದರು.Minister -Dr K Sudhakar-state- ready -coronary vaccine- delivery

ಲಸಿಕೆ ವಿತರಣೆಗೆ ಬೇಕಾದ ಹೆಚ್ಚುವರಿ ಮೂಲಸೌಕರ್ಯವನ್ನು ಕೇಂದ್ರ ಸರ್ಕಾರ ನೀಡಲಿದೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ  ಎಂದು ಸಚಿವ ಸುಧಾಕರ್ ತಿಳಿಸಿದರು.

ENGLISH SUMMARY…..

State ready for Vaccine Distribution: Health Minister Dr.K.Sudhakar

Dr.K.Sudhakar inspected dry run at Yelahanka General Hospital

Vaccine may be available in January itself

Bengaluru, January 2, Saturday

The vaccination dry run has helped to train the staff. It is excpected that vaccine may be available in January itself and this dry run will help us to implementing the vaccination drive later, said Health Minister Dr.K.Sudhakar.

Dr.K.Sudhakar visited the model vaccination centre in Yelahanka General Hospital and inspected the dry run.

Speaking to the media, Minister said that dry run is being carried out in 5 districts in the state. 25 people were administered vaccine (mock) in the dry run. Regular meetings have been conducted with l hospitals to prepare for the vaccination drive.

Union Health Minister has said that all corona warriors will be administered vaccine in the first phase free of cost. Centre will issue detailed guidelines and SOPs for vaccination. All neccessary infrastructure like cold storage, logistics, manpower are being arranged. We will also use the existing infrastructure and centre will augment the additional infrastructure, he added.

10 UK returnees in the state have been detected with new strain of virus. All of them are being treated and isolated in Government hospitals. The infection is not severe in any of them. More than 12 lakh people have recovered in the state so far, Minister said.

Key words: Minister -Dr K Sudhakar-state- ready -coronary vaccine- delivery