Friday, October 30, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ನನ್ನ ನಿಲುವು ಸ್ಪಷ್ಟ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ನನ್ನ ನಿಲುವು ಸ್ಪಷ್ಟ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ, ಜುಲೈ, 28,2026 (www.justkannada.in): ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ, ನನ್ನ ನಿಲುವು ಸ್ಪಷ್ಟ ಎಂದು  ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ನುಡಿದರು.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬೆಳಗಾವಿಯನ್ನು ಕರ್ನಾಟಕದ ಅವಿಭಾಜ್ಯ ಅಂಗವೆಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳುವಂತೆ ಹಾಗೂ ಪಾಲಿಕೆಯಲ್ಲಿ ಅನುಸರಿಸಲಾಗುತ್ತಿರುವ ತ್ರಿಭಾಷಾ ಸೂತ್ರದ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.ಬಾಲಕಿ ಅತ್ಯಾಚಾರ, ಕೊಲೆ ಕೇಸ್ ನಲ್ಲಿ ಗಲ್ಲುಶಿಕ್ಷೆ: ಕೋರ್ಟ್ ತೀರ್ಪಿಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ವಾಗತ

ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, “ಬೆಳಗಾವಿ ಯಾವತ್ತಿದ್ದರೂ ಕರ್ನಾಟಕದ ಅವಿಭಾಜ್ಯ ಅಂಗ. ಈ ವಿಷಯದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟವಾಗಿದೆ,” ಎಂದು ಹೇಳಿದರು.ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ BDA JK_Adv BDA Adv

ಕನ್ನಡ ಪರ ಸಂಘಟನೆಗಳು ಈ ಹಿಂದೆ ಸಲ್ಲಿಸಿರುವ ಬೇಡಿಕೆಗಳನ್ನು ಈಗಾಗಲೇ ಕಾನೂನು ಇಲಾಖೆಯ ಪರಿಶೀಲನೆಗೆ ಕಳುಹಿಸಲಾಗಿದೆ. ಅಲ್ಲದೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಹಾಗೂ ಅಭಿಪ್ರಾಯ ಪಡೆಯಲಾಗುವುದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ನನ್ನ ನಿಲುವು ಸ್ಪಷ್ಟ yathindra siddaramaiah yathindra siddaramaiah 3

ಈ ವಿಚಾರದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯೂ ಸಹ ಕಾನೂನುಬದ್ಧವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕದಂತೆ ಅಗತ್ಯ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದರು.ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ jk02_new jk02 new

ಈ ಸಂದರ್ಭದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Key words: Belgaum, integral part, Karnataka, Minister, Dr. Yathindra Siddaramaiah