ತುಮಕೂರು, ಮೇ,21,2025 (www.justkannada.in): ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ದಾಳಿ ನಡೆದಿದ್ದು, ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಇಂದು (ಮೇ 21) ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ಈ ಸಂಸ್ಥೆಗಳಿಗೆ ಆಗಮಿಸಿ ಪರಿಶೀಲನೆ ಪ್ರಕ್ರಿಯೆ ಆರಂಭಿಸಿದ್ದಾರೆ. ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಯುತ್ತಿರುವ ಮಾಹಿತಿ ಲಭ್ಯವಾಗಿದೆ. 2019ರಲ್ಲಿ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಐಟಿ ದಾಳಿಯಾಗಿತ್ತು.
Key words: ED raids, ‘Siddhartha Education Institute, owned, Minister, G. Parameshwar