ಬೆಂಗಳೂರು,ಆಗಸ್ಟ್,20,2025 (www.justkannada.in): ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಲ್ಲಿಸಿರುವ ವರದಿ ಜಾರಿ ಕುರಿತು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಸದನದಲ್ಲಿ ಈ ಬಗ್ಗೆ ಚರ್ಚೆಯಾಗಲಿದ್ದು ವರದಿ ಅನುಷ್ಟಾನ ಬಗ್ಗೆ ಸಿಎಂ ಸಿದ್ದರಾಮಯ್ಯ ಇಂದು ಘೋಷಣೆ ಮಾಡಲಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಎಲ್ಲರ ಹಿತ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ. ವರದಿಯನ್ನ ಸ್ವಲ್ಪ ಪರಿಷ್ಕರಣೆ ಮಾಡಲಾಗಿದೆ. ವರದಿ ಅನುಷ್ಟಾನದ ಬಗ್ಗೆ ಸಿಎಂ ಸದನದಲ್ಲಿ ಘೋಷಣೆ ಮಾಡುತ್ತಾರೆ ಎಂದರು.
ಎಸ್ ಸಿ ಒಳ ಮೀಸಲಾತಿಗಾಗಿ 35 ವರ್ಷ ನಡೆಸಿದ ಹೋರಾಟಕ್ಕೆ ಫಲ ಸಿಕ್ಕಿದೆ. ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ನೀಡಲಾಗಿದೆ. ಒಳ ಮೀಸಲಾತಿಗೆ ಹೋರಾಟ ಮಾಡಿದವರಿಲ್ಲರಿಗೂ ಅಭಿನಂದನೆ. 35 ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.
Key words: Internal reservation, Justice 35 years, struggle, Minister, H.C. Mahadevappa