ಮೈಸೂರು,ಡಿಸೆಂಬರ್,26,2025 (www.justkannada.in): ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ದುರಂತ ಪ್ರಕರಣ ಸಂಬಂಧ ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಮೈಸೂರು ಅರಮನೆ ಬಳಿ ಸಂಭವಿಸಿದ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಓರ್ವ ಸಾವನ್ನಪ್ಪಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಇಂದು ಸಚಿವ ಹೆಚ್ ಸಿ ಮಹದೇವಪ್ಪ ಕೆಆರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್ ಸಿ ಮಹದೇವಪ್ಪ, ಸಿಲಿಂಡರ್ ಸ್ಪೋಟ ಅನಿರೀಕ್ಷಿತ ಘಟನೆಯಾಗಿದೆ. ಇದೊಂದು ಫಾಠ ಕಲಿಯಬೇಕಿರುವ ದುರ್ಘಟನೆಯಾಗಿದೆ. ಮೃತ ಸಲೀಂ ಸೀಸನಲ್ ವ್ಯಾಪಾರ ಮಾಡಿಕೊಂಡಿದ್ದ ಎಂದರು.
Key words: Mysore, cylinder blast, Minister, H.C. Mahadevappa







