ಮೈಸೂರು,ಜನವರಿ,17,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಈಗ ಅಸ್ಸಾಂ ಚುನಾವಣೆಯ ವೀಕ್ಷಕರಾಗಿ ನೇಮಕವಾಗಿದ್ದಾರೆ ಹೀಗಾಗಿ ದೆಹಲಿಗೆ ಹೋಗಿದ್ದಾರೆ. ಇದಕ್ಕೆ ಯಾವ ವಿಶೇಷ ಅರ್ಥಗಳು ಬೇಡ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟಪಡಿಸಿದರು.
ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಸುಮ್ಮನೆ ಏನೋ ಆಗುತ್ತದೆ ಎಂದು ಕಾಯುತ್ತಿದ್ದಾರೆ. ಬಿಜೆಪಿ ಯಾವಾಗಲೂ ಪರಿಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಇಂತಹ ಸಂದರ್ಭಗಳನ್ನ ಅವರು ಕಾಯುತ್ತಿರುತ್ತಾರೆ. ನಂತರ ಕೈಗೆ ಸಿಗದ ದ್ರಾಕ್ಷಿ ಹುಳಿ ಎಂದುಕೊಂಡು ಹೋಗುತ್ತಾರೆ. ಇದು ಕೂಡ ಅಷ್ಟೇ ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್ ಸಿ ಮಹದೇವಪ್ಪ, ಬಿಜೆಪಿ-ಜೆಡಿಎಸ್ ಹಿಂದಿನ ಚುನಾವಣೆಗಳಲ್ಲಿ ಅನಧಿಕೃತ ಹೊಂದಾಣಿಕೆಯಲ್ಲಿದ್ದರು. ಈಗೀನ ಚುನಾವಣೆಯಲ್ಲಿ ಅಧಿಕೃತ ಹೊಂದಾಣಿಕೆಯಲ್ಲಿದ್ದಾರೆ. ಇದರಲ್ಲಿ ಬೇರೆ ವ್ಯತ್ಯಾಸಗಳು ಇಲ್ಲ. ಕಾಂಗ್ರೆಸ್ ಮೇಲೆ ಇದು ಯಾವ ಪರಿಣಾಮ ಬೀರುವುದಿಲ್ಲ ಎಂದರು.
Key words: Siddaramaiah, will be, CM, till 2028, Minister, H.C Mahadevappa







