ಬೆಂಗಳೂರು,ಸೆಪ್ಟಂಬರ್,25,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಗೈರಾಗುವ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
ಇಂದು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಸಮೀಕ್ಷೆ ಗೈರಾದ ಸಿಬ್ಬಂದಿ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಧರ್ಮಸ್ಥಳ ಪ್ರಕರಣ ಸಂಬಂಧ ಬುರುಡೆ ಗ್ಯಾಂಗ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಪಿಐಎಲ್ ವಜಾ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್,ಪಿಐಎಲ್ ವಜಾ ಬಗ್ಗೆ ಗೊತ್ತಿಲ್ಲ ಸಾರ್ವಜನಿಕ ಹಿತಾಸಕ್ತಿ ಇಲ್ಲವೆಂದು ವಜಾ ಮಾಡಿರಬಹುದು ಎಂದರು.
Key words: action, staff, officers, absent, caste census, survey, Minister, H.K. Patil