EVM ಬಗ್ಗೆ ಅನುಮಾನ: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ನಿರ್ಧಾರ- ಸಚಿವ ಹೆಚ್.ಕೆ ಪಾಟೀಲ್

ಬಾಗಲಕೋಟೆ,ಜನವರಿ,20,2026 (www.justkannada.in): ದೇಶದ ತುಂಬಾ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ .ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ನಿರ್ಧಾರ ಮಾಡಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಈ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಯಾಗುತ್ತದೆ. ಉಪಚುನಾವಣೆಯಲ್ಲೂ ಬ್ಯಾಲೆಟ್ ಪೇಪರ್ ಬಳಕೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ನಾಯಕತ್ವ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್,  ಸಿಎಂ ಸ್ಥಾನದ ಬಗ್ಗೆ ಮಾತನಾಡಬೇಡಿ ಎಂದು ಹೈಕಮಾಂಡ್ ಹೇಳಿದೆ. ನಾನು ಒಂದು ಹೇಳಿದ್ರೆ ಅದಕ್ಕೆ ಬೇರೆ ರೀತಿ ರೆಕ್ಕೆ ಪುಕ್ಕ ಕೊಡುತ್ತೀರಿ. ಈ ಕಾರಣಕ್ಕೆ ಮಾತನಾಡಲ್ಲ.  ಏನು ಬೆಳವಣಿಗೆ ಆಗುತ್ತಿದೆ ಎಂಬ ಯಾವ ಮಾಹಿತಿಯೂ ಇಲ್ಲ ಎಂದು ಹೇಳಿದರು.

Key words: EVM, use, ballot paper, GBA elections, Minister, H.K. Patil