ರಾಜ್ಯದಲ್ಲಿ ಶೀಘ್ರ ನ್ಯಾಯದಾನಕ್ಕೆ ದಿಟ್ಟ ಹೆಜ್ಜೆ: ಸಿಪಿಸಿ ಕಾನೂನಿನಲ್ಲಿ ಮಹತ್ವದ ಬದಲಾವಣೆ- ಸಚಿವ ಹೆಚ್.ಕೆ ಪಾಟೀಲ್

ಬೆಂಗಳೂರು,ಮೇ,27,2025 (www.justkannada.in): ದೇಶದಲ್ಲಿಯೇ ಮೊದಲ ಬಾರಿ ಕರ್ನಾಟಕದಲ್ಲಿ ಶೀಘ್ರ ನ್ಯಾಯದಾನಕ್ಕೆ ದಿಟ್ಟ ಹೆಜ್ಜೆ ಇಡಲಾಗಿದ್ದು ರಾಜ್ಯದಲ್ಲಿ ಬಡ ಕಕ್ಷಿದಾರರಿಗೆ ಶೀಘ್ರ ನ್ಯಾಯ ದೊರಕಿಸಲು ಸಿಪಿಸಿ ಕಾನೂನಿನಲ್ಲಿ ಮಹತ್ವದ ಬದಲಾವಣೆ ತರಲಾಗಿದೆ ಎಂದು ಕಾನೂನು ಮತ್ತು ಸಂಸದೀಐ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್,  ರಾಜ್ಯದ ಕಕ್ಷಿದಾರರಲ್ಲಿ ರಾಜಿ ಸಂಧಾನದ ಮುಖಾಂತರ ನ್ಯಾಯ ಬಗೆಹರಿಸಲು ಅನುಕೂಲಿಸಲು ದೇಶದಲ್ಲಿಯೇ ಮೊದಲ ಬಾರಿಗೆ ಸಿಪಿಸಿ ಕಾನೂನಿಗೆ ಮಹತ್ವದ ಬದಲಾವಣೆ ತರಲಾಗುತ್ತಿದೆ. ರಾಜ್ಯದಲ್ಲಿ ನಿರ್ದಿಷ್ಟ ಸಮಯ ಪಾಲನೆಯೊಂದಿಗೆ ಸಿವಿಲ್ ಪ್ರಕರಣಗಳ ಇತ್ಯರ್ಥಕ್ಕೆ ಸಿಪಿಸಿ ಕಾನೂನಿನಲ್ಲಿ ಬದಲಾವಣೆ ತರಲಾಗುತ್ತಿದೆ ಎಂದರು.vtu

ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆ ತರುವ ಉದ್ದೇಶದಿಂದ ಸಿಪಿಸಿ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿಗಳನ್ನು ಮಾಡಿತ್ತು. ರಾಜ್ಯದಲ್ಲಿ ನಿರ್ದಿಷ್ಟ ಸಮಯ ಪಾಲನೆಯೊಂದಿಗೆ ಸಿವಿಲ್ ಪ್ರಕರಣಗಳು ಇತ್ಯರ್ಥಗೊಂಡು, ಶೀಘ್ರ ನ್ಯಾಯದಾನಕ್ಕೆ ಈ ತಿದ್ದುಪಡಿಗಳು ಅವಕಾಶ ಕಲ್ಪಿಸಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: speedy justice, state, change, CPC law,  Minister, H.K. Patil