ಬೆಂಗಳೂರು,ಜನವರಿ,16,2026 (www.justkannada.in): ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಟೀಕಿಸಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಸಿದ್ದರಾಮಯ್ಯ ಸಿಎಂ ಆಗಿ ಇತಿಹಾಸ ಸೃಷ್ಠಿ ಮಾಡಿದ್ದಾರೆ. ಸಿದ್ದರಾಮಯ್ಯ ಯಾವ ರೀತಿ ಲೀಸ್ ಬೇಸ್ಡ್ ಸಿಎಂ ಆಗ್ತಾರೆ. ಸಿದ್ದರಾಮಯ್ಯ 7.5 ವರ್ಷ ಸಿಎಂ ಆಗಿ ದಾಖಲೆ ಮಾಡಿದ್ದಾರೆ. ಲೀಸ್ ಅಂದರೆ ಮೂರ್ನಾಲ್ಕು ತಿಂಗಳು ಅಷ್ಟೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ರಿಂದ ರಾಹುಲ್ ಗಾಂಧಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್ ಸಿ ಮಹದೇವಪ್ಪ, ಡಿಕೆ ಶಿವಕುಮಾರ್ ಅಸ್ಸಾಂ ಚುನಾವಣಾ ವೀಕ್ಷಕರಾಗಿದ್ದಾರೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರು. ಹೀಗಾಗಿ ಯಾರನ್ನೂ ಆದರೂ ಭೇಟಿಯಾಗುತ್ತಾರೆ ಎಂದು ಸ್ಪಷ್ಟಪಡಿಸಿದರು.
Key words: CM, Siddaramaiah, Minister, HC Mahadevappa, HDK







