Sunday, October 18, 2026

Dasara Wishes

Happy Dasara
Home Front Page ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ.

ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ.

ಬೆಂಗಳೂರು,ಜನವರಿ,19,2024(www.justkannada.in): ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಇಲಾಖಾ ವಿದ್ಯಾರ್ಥಿನಿಲಯಗಳ ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಉಪಸ್ಥಿತಿಯಲ್ಲಿ ನೇಮಕಾತಿ ಆದೇಶ ವಿತರಣೆ ಮಾಡಲಾಯಿತು.

ಬೆಂಗಳೂರಿನ ಲಿಡ್ಕರ್ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  ಸಚಿವ ಹೆಚ್.ಸಿ ಮಹದೇವಪ್ಪ, ಸಾಂಕೇತಿಕವಾಗಿ ನೇಮಕಾತಿ ಆದೇಶವನ್ನು ವಿತರಿಸಿ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅತ್ಯಂತ ಜವಾಬ್ದಾರಿಯಿಂದ ವಸತಿನಿಲಯಗಳನ್ನು ನಿರ್ವಹಿಸುವಲ್ಲಿ ಸದಾ ಬದ್ಧರಾಗಿರಬೇಕು ಎಂದು ಸೂಚನೆಯನ್ನು ನೀಡಿದರು.ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ warden

ಈ ಸಂದರ್ಭದಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ನೋಡಲ್ ಏಜೆನ್ಸಿ ಸಲಹೆಗಾರ ಡಾ. ಇ. ವೆಂಕಟಯ್ಯ, ಸಮಾಜ‌ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ್ ಕೆ, ಇಲಾಖೆಯ ವಿವಿಧ ವಿಭಾಗಗಳ ಅಪರ ನಿರ್ದೇಶಕರು, ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳು ಮತ್ತು ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಉಪಸ್ಥಿತರಿದ್ದರು.

Key words: minister-HC Mahadevappa-appointment order – selected -candidates – post – Warden.