Thursday, August 6, 2026

BDA Apartments

Home Front Page ಕೇಂದ್ರದ ವಿರುದ್ಧ ನಾಳಿನ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ ಸಚಿವ ಹೆಚ್.ಸಿ ಮಹದೇವಪ್ಪ.

ಕೇಂದ್ರದ ವಿರುದ್ಧ ನಾಳಿನ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ ಸಚಿವ ಹೆಚ್.ಸಿ ಮಹದೇವಪ್ಪ.

ಮೈಸೂರು,ಜೂನ್,19,2023(www.justkannada.in): ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಹೀಗಾಗಿ ನಾಳೆ ಕೇಂದ್ರ ಸರ್ಕಾರದ ವಿರುದ್ದ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಸಾಧ್ಯವಾಗಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡುವುದಾಗಿ ತಿಳಿಸಿತ್ತು. ಆ ನಂತರ ಕೊಡಲಾಗುವುದಿಲ್ಲ ಎಂದು ಹೇಳಿದೆ. ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ನಾಳೆ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ, ಪ್ರತಿಭಟನೆಯಲ್ಲಿ ಭಾಗಿಯಾಗುವುದಿಲ್ಲ. ಹೀಗಾಗಿ ನಮ್ಮ ಜಿಲ್ಲೆಯ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದರು.

Key words: Minister -HC Mahadevappa – not participate – tomorrow –Congress- protest