Thursday, July 30, 2026

BDA Apartments

Home Front Page ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ರಾಜ್ಯದಲ್ಲಿ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಇದು ಗಂಭೀರ ವಿಚಾರ. ಕೇಂದ್ರ ಸರ್ಕಾರ ವಿಫಲವಾಗಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಿಳಿಸಿದರು.

ಬೇರೆ ಬೇರೆ ಮೂಲಗಳಿಂದ ಗ್ಯಾಸ್ ಖರೀದಿ ಮಾಡಬೇಕು. ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಆಗುತ್ತಿದೆ. ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Key words: Gas cylinders, not available, state, Minister, Ishwar Khandre