ಟಿಪ್ಪು ಜಯಂತಿ : ಈಗ ಸರ್ಕಾರದ ಮುಂದೆ ಅಂತಹ ಪ್ರಸ್ತಾಪ ಇಲ್ಲ- ಸಚಿವ ಜಮೀರ್ ಅಹ್ಮದ್ ಖಾನ್

ಬೆಳಗಾವಿ,ಡಿಸೆಂಬರ್,9,2025 (www.justkannada.in):  ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು ಮತ್ತೆ ಆಚರಣೆ ಆರಂಭಕ್ಕೆ ಕಾಂಗ್ರೆಸ್ ನಾಯಕರಿಂದ ಒತ್ತಾಯ ಕೇಳಿ ಬಂದಿದೆ.

ಈ ಕುರಿತು ಮಾತನಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯ ಸರ್ಕಾರದ ಕಡೆಯಿಂದ ಟಿಪ್ಪು ಜಯಂತಿ ಸ್ಥಗಿತ ಆಗಿದೆ ಅಷ್ಟೆ.  ಅಭಿಮಾನಿಗಳು ಯಾರು ಟಿಪ್ಪು ಜಯಂತಿ ಆಚರಣೆ ನಿಲ್ಲಿಸಲ್ಲ ಎಂದರು.

ಸಿದ್ದರಾಮಯ್ಯ ಬ್ಯಾಂಕ್ವೆಟ್ ಹಾಲ್ ನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದರು ಬಳಿಕ ಸ್ಥಗಿತ ಆಯಿತು.  ಈಗ ಸರ್ಕಾರದ ಮುಂದೆ ಟಿಪ್ಪು ಜಯಂತಿ ಆಚರಣೆ ಅಂತಹ ಯಾವುದೇ ಪ್ರಸ್ತಾಪ ಇಲ್ಲ ಅಭಿಮಾನಿಗಳು ಟಿಪ್ಪು ಜಯಂತಿ ಮಾಡಿಯೇ ಮಾಡುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Key words: Tippu Jayanti, no proposal, government, Minister, Jameer Ahmed Khan