ಇಡಿ ಅಧಿಕಾರಿಗಳು ನೀಡಿದ್ದ ನೋಟೀಸ್ ಕುರಿತು ಸ್ಪಷ್ಟನೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್….

ಬೆಂಗಳೂರು,ಜೂ,28,2019(www.justkannada.in): ಇಡಿ ಅಧಿಕಾರಿಗಳು ತಮಗೆ ನೋಟಿಸ್ ನೀಡಿರುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇಡಿ ಅಧಿಕಾರಿಗಳು ನನ್ನ ಮನೆಗೆ ಭೇಟಿ ನೀಡಿದ್ದು, ಜುಲೈ 5ರೊಳಗೆ ಐಎಂಎ ಗೆ ಮಾರಾಟ ಮಾಡಿರುವ ಆಸ್ತಿಗೆ ಸಂಬಂಧಿಸಿದ ದಾಖಲೆ ನೀಡುವಂತೆ ನೋಟಿಸ್ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ನನ್ನ ಬಳಿ ಇದ್ದು, ಅದನ್ನು ಸಕಾಲದಲ್ಲಿ ಇಡಿ ಇಲಾಖೆಗೆ ಒದಗಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಹೂಡಿಕೆದಾರರಿಗೆ ಐಎಂಎ ಮಾಲೀಕ ಮನ್ಸೂರ್ ಖಾನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಕೇಳಿ ಬಂದಿತ್ತು.

Key words: Minister- Jamir Ahmed Khan- clarified – notice –issued- ED