ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ, ಸಹಿಸಿಕೊಳ್ಳಬೇಕು-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,13,2026 (www.justkannada.in): ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ ಹೋಟೆಲ್ ನವರು ಒಂದು ವಾರ ಸಹಿಸಿಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ದೇಶದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಬಗ್ಗೆ ವಿಧಾನ ಪರಿಷತ್ ನಲ್ಲಿ ನಾಗರಾಜ್ ಯಾದವ್ ಮತ್ತು ಐವಾನ್ ಡಿಸೋಜಾ ಅವರು ಪ್ರಸ್ತಾಪಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಕೆ.ಎಚ್ ಮುನಿಯಪ್ಪ, ಇಂದು ಕೂಡ ಆಯಿಲ್ ಕಂಪನಿ ಜತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರ ವಸತಿ ನಿಲಯಕ್ಕೂ ಕಮರ್ಷಿಯಲ್ ಗ್ಯಾಸ್ ಕೊಡುತ್ತೇವೆ. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯಲಿದೆ. ಹೋಟೆಲ್ ನವರಿಗೆ ಎಲೆಕ್ಟ್ರಿಕ್ ಸ್ಟೌವ್ ಬಳಕೆಗ ಮನವಿ ಮಾಡಿದ್ದೇವೆ ಎಂದರು.

ಹೋಟೆಲ್ ನವರು ಒಂದು ವಾರ ಸಹಿಸಿಕೊಳ್ಳಬೇಕು.  ವಾಣಿಜ್ಯ ಗ್ಯಾಸ್ ಒಂದು ವಾರ ಅಥವಾ 10 ದಿನ ಸಮಸ್ಯಯಾಗುತ್ತದೆ. ವಾಣಿಜ್ಯ ಸಿಲಿಂಡರ್ ‍ಸ್ಟಾಕ್ ಇಲ್ಲ. ಸಹಿಸಿಕೊಳ್ಳಬೇಕು. ಆಟೋಗಳಿಗೆ ಗ್ಯಾಸ್ ಸಿಲಿಂಡರ್ ಕೊಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words: no commercial, cylinder stock, Minister, K.H. Muniyappa