ಕೋರ್ಟ್ ತೀರ್ಪು ಸ್ವಾಗತ: ಬಿಜೆಪಿಯವರಿಂದ ಹಿಟ್ ಅಂಡ್ ರನ್- ಸಚಿವ ಕೆ.ಜೆ ಜಾರ್ಜ್

ಬೆಂಗಳೂರು,ಆಗಸ್ಟ್,7,2025 (www.justkannada.in): ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ  16 ಸಾವಿರ ಕೋಟಿ ರೂ. ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಇಂಧನ ಸಚಿವ ಕೆಜೆ ಜಾರ್ಜ್‌ ರಿಲೀಫ್ ನೀಡಿತ್ತು.

ಈ ಕುರಿತು ಮಾತನಾಡಿರುವ ಸಚಿವ ಕೆ.ಜೆ ಜಾರ್ಜ್   ನ್ಯಾಯಾಲಯದ ತೀರ್ಪು ಸ್ವಾಗತಿಸುತ್ತೇನೆ .  ಸ್ಮಾರ್ಟ್ ಮೀಟರ್ ವಿಚಾರದಲ್ಲಿ ಬಿಜೆಪಿಯವರು ದೂರು ನೀಡಿದ್ದರು. ಲೋಕಾಯುಕ್ತ, ಗವರ್ನರ್ ಹೈಕೋರ್ಟ್ ಗೆ ದೂರು ನೀಡಿದ್ದರು.  ಬಿಜೆಪಿಯವರ ಬರೀ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದೀಗ ಕೋರ್ಟ್ ತೀರ್ಪು ನೀಡಿದೆ. ತೀರ್ಪನ್ನ ಸ್ವಾಗತ ಮಾಡುತ್ತೇವೆ ಏನೇ ಆದರೂ ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದರು.

ಸ್ಮಾರ್ಟ್ ಮೀಟರ್ ಟೆಂಡರ್‌ ಅಕ್ರಮ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ (KG George) ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ, ಸಚಿವ ಕೆಜೆ ಜಾರ್ಜ್ ಹೈಕೋರ್ಟ್‌ ಮೆಟ್ಟಿಲೇರಿದ್ದರು.. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಲೋಕಾಯುಕ್ತ ಎಸ್ಪಿ ಹಾಗೂ ದೂರುದಾರರಾದ ಬಿಜೆಪಿ ನಾಯಕರಾದ ಸಿಎನ್ ಅಶ್ವಥ್ ನಾರಾಯಣ್, ಎಸ್ ಆರ್ ವಿಶ್ವನಾಥ್, ಧೀರಜ್ ಮುನಿರಾಜು ಅವರಿಗೆ ನೋಟಿಸ್‌ ನೀಡಿತ್ತು.

ಲೋಕಾಯುಕ್ತ ಪೊಲೀಸರಿಂದ  ವರದಿ ನೀಡುವಂತೆ ವಿಚಾರಣಾಧೀನ ನ್ಯಾಯಾಲಯ ಮಾಡಿರುವ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ ಎರಡು ವಾರ ವಿಚಾರಣೆ ಮುಂದೂಡಿಕೆ ಮಾಡಿದೆ.

Key words: Smart meter, illegal, Court, verdict, BJP, Minister, K.J. George