ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ನುಡಿದರು.
ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಚಿವ ಕೆ.ವೆಂಕಟೇಶ್ , ಎಲ್ಲಾ ಜಿಲ್ಲೆಗಳಂತೆ ಮೈಸೂರು ಜಿಲ್ಲೆಯಲ್ಲೂ ಸಾಧನಾ ಸಮಾವೇಶ ಮಾಡಿದ್ದೇವೆ. ಯಾವುದೇ ಅಭಿವೃದ್ಧಿ ಕಾರ್ಯ ಮಾಡುತ್ತಿಲ್ಲ ಎಂದು ಪ್ರತಿ ಪಕ್ಷದ ನಾಯಕರು ಆರೋಪಿಸುತ್ತಿದ್ದಾರೆ. ಅವರಿಗೆ ಉತ್ತರ ನೀಡಲು ಎಲ್ಲಾ ಜಿಲ್ಲೆಗಳಲ್ಲೂ ಸಾಧನಾ ಸಮಾವೇಶ ಮಾಡುತ್ತಿದ್ದೇವೆ. ನಮ್ಮ ಮೇಲೆ ಆರೋಪಿಸಲು ಅವರಿಗೆ ವಿಷಯಗಳೇ ಇಲ್ಲ. ನಮ್ಮ ಸಾಧನೆಗಳನ್ನು ಮನವರಿಕೆ ಮಾಡಿಕೊಡಲು ಸಮಾವೇಶ ಮಾಡಿದ್ದೇವೆ ಎಂದರು.
ಬಿಜೆಪಿ ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ಭ್ರಷ್ಟಾಚಾರದಲ್ಲಿ ಮುಳುಗಿದ್ದರು. ಈಗಲೂ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಜನರ ಕಷ್ಟ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.
Key words: guarantee plan, not, stop, Minister, K. Venkatesh