Wednesday, October 14, 2026

Dasara Wishes

Happy Dasara
Home Front Page ಆಟೋ ಗ್ಯಾಸ್ ಪೂರೈಕೆಯಲ್ಲಿ ಸುಧಾರಣೆ ಆಗಿಲ್ಲ: ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ- ಸಚಿವ ಮುನಿಯಪ್ಪ

ಆಟೋ ಗ್ಯಾಸ್ ಪೂರೈಕೆಯಲ್ಲಿ ಸುಧಾರಣೆ ಆಗಿಲ್ಲ: ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ- ಸಚಿವ ಮುನಿಯಪ್ಪ

ಬೆಂಗಳೂರು,ಏಪ್ರಿಲ್,10,2026 (www.justkannada.in):  ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಸುಧಾರಣೆ ಆಗಿದೆ. ಆದರೆ ಆಟೋ ಗ್ಯಾಸ್ ಪೂರೈಕೆಯಲ್ಲಿ ಸುಧಾರಣೆ ಆಗಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ರಾಜ್ಯದಲ್ಲಿ ಗ್ಯಾಸ್ ಅಭಾವ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ  ಸುಧಾರಣೆ ಆಗಿದೆ.  ಆಟೋ ಗ್ಯಾಸ್ ನಲ್ಲಿ ಸುಧಾರಣೆ ಆಗಿಲ್ಲ. ನಾವು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಜವಾಬ್ದಾರಿಯಿಂದ ನಿರ್ವಹಣೆ ಮಾಡಿಲ್ಲ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಅತಿಹೆಚ್ಚು ಆಟೋಗ್ಯಾಸ್ ಬಳಕೆಯಾಗುತ್ತಿದೆ. ಬೆಂಗಳೂರಿನಲ್ಲಿ 1.60 ಲಕ್ಷ ಆಟೋ ಬಂಕ್ ಏಜೆನ್ಸಿಗಳಿವೆ. ಆಟೋಚಾಲಕರಿಗೆ ಸಹಾಯ ಮಾಡುವ ವಿಚಾರದ ಬಗ್ಗೆ ಚರ್ಚೆ ಮಾಡಲಾಗುತ್ತದೆ ಆಟೋಗ್ಯಾಸ್ ಗೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸುತ್ತೇವೆ. ಈ ಬಗ್ಗೆ ಕ್ರಮ ತೆಗೆದುಕೊಂಡು ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸಬೇಕು ಎಂದು ಸಚಿವ ಮುನಿಯಪ್ಪ ಹೇಳಿದರು.

Key words:  no improvement, auto gas, supply, Minister, KH Muniyappa